Thursday, July 30, 2026
spot_imgspot_img
spot_imgspot_img

ಕಂಬಳದ ವೀರ ಮಿಜಾರು ಶ್ರೀನಿವಾಸ್ ಗೌಡ ಹೊಸ ದಾಖಲೆ; 9.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರ ಕ್ರಮಿಸಿ ದಾಖಲೆ ನಿರ್ಮಾಣ

- Advertisement -
- Advertisement -

ಮಂಗಳೂರು: ಇಂಡಿಯನ್ ಉಸೇನ್ ಬೋಲ್ಟ್ ಎಂದೇ ಜನಪ್ರಿಯರಾಗಿರುವ ಕಂಬಳದ ವೀರ ಮಿಜಾರು ಶ್ರೀನಿವಾಸ್ ಗೌಡ ಅವರು ಈ ಹಿಂದಿನ ತಮ್ಮದೇ ದಾಖಲೆ ಮುರಿದಿದ್ದು, ಕೇವಲ 9.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸಗೌಡ ಹೊಸ ದಾಖಲೆ ಬರೆದಿದ್ದಾರೆ.

ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ್ ಗೌಡ, ಕೇವಲ 11.21 ಸೆಕೆಂಡ್‍ಗಳಲ್ಲಿ 125 ಮೀಟರ್ ದೂರವನ್ನು ಕ್ರಮಿಸಿದ್ದಾರೆ. ಅಂದರೆ ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ತಲುಪಿದ್ದು, ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಸರಗಟ್ಟಿದ್ದಾರೆ.

2020ರ ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈಗಾಗಲೇ ಕಂಬಳದ ವೀರನ ಸಾಧನೆ ಕುರಿತು ಸಿನಿಮಾ ಮಾಡಲಾಗುತ್ತಿದ್ದು, ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದಾರೆ. ಈ ಚಿತ್ರವನ್ನು ನಿಖಿಲ್ ಮಂಜು ಅವರು ನಿರ್ದೇಶನ ಮಾಡುತ್ತಿದ್ದಾರೆ.

- Advertisement -

Related news

error: Content is protected !!