Monday, April 29, 2024
spot_imgspot_img
spot_imgspot_img

ಕಂಬಳಬೆಟ್ಟು: ವಿಟ್ಲ ಮಾಹಾ ಶಕ್ತಿ ಕೇಂದ್ರ ಹಾಗೂ ಪುಣಚ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ; ಭಾರತ ಮಾತೆಗೆ ಶಕ್ತಿ ತುಂಬುವ ಕೆಲಸ ಮಾಡೋಣ ಅದಕ್ಕಾಗಿ ನಾವೆಲ್ಲರೂ ಶ್ರಮಿಸೋಣ: ದ ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.ಬಳಿಕ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಂತರ ವಿಟ್ಲ ಅರಮನೆಗೆ ಭೇಟಿ ನೀಡಿದರು.

ಬಳಿಕ ಕಂಬಳಬೆಟ್ಟು ಧರ್ಮನಗರ ಸಮಾಜ ಮಂದಿರದಲ್ಲಿ ನಡೆದ ವಿಟ್ಲ ಮಾಹಾ ಶಕ್ತಿ ಕೇಂದ್ರ ಹಾಗೂ ಪುಣಚ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ ‘ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ನನಗೆ ದೊರೆತ ಈ ಜವಾಬ್ದಾರಿ ಖಂಡಿತವಾಗಿಯೂ ಅದು ತುಳುನಾಡಿನ ಎಲ್ಲಾ ದೈವ ದೇವರ ಆಶೀರ್ವಾದ, ಹಾಗೂ ಕಾರ್ಯಕರ್ತರ ಪ್ರಾರ್ಥನೆ ಮತ್ತು ಆಶೀರ್ವಾದದಿಂದ. ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಎಲ್ಲಾ ಪಕ್ಷದ ಮುಖಂಡರಿಗೆ ಹಾಗೂ ಎಲ್ಲಾ ಕಾರ್ಯಕರ್ತರಿಗೆ ಸದಾ ಚಿರಋಣಿಯಾಗಿರುತ್ತೇನೆ. ರಾಷ್ಟದ ಭವಿಷ್ಯದಲ್ಲಿ ನಮ್ಮ ಭವಿಷ್ಯ ಅಡಗಿದೆ. ನಾವೆಲ್ಲರೂ ಹಿಂದುತ್ವಕ್ಕಾಗಿ ದುಡಿಯೋಣ, ಹಿಂದೂ ರಾಷ್ಟ್ರಕಾಗಿ ಶ್ರಮಿಸೋಣ.. ದ ಕ ಜಿಲ್ಲೆಯ ಜನರ ಸಾಮರ್ಥ್ಯಕ್ಕೆ ವೇದಿಕೆ ನಿರ್ಮಾಣ ಮಾಡೋಣ, ಪ್ರಧಾನ ಮಂತ್ರಿಗೆ ಹಾಗೂ ಭಾರತ ಮಾತೆಗೆ ಶಕ್ತಿ ತುಂಬುವ ಕೆಲಸ ಮಾಡೋಣ ಅದಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದರು.

ನಿಕಟ ಪೂರ್ವ ಶಾಸಕ ಸಂಜೀವ ಮಠಂದೂರು ಮಾತನಾಡಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ನಾವೆಲ್ಲರೂ ಶ್ರಮಿಸೋಣ, ಇದು ದೇಶದ ಚುನಾವಣೆ, ಮತ್ತೊಮ್ಮೆ ಮೋದಿ ಸರಕಾರವನ್ನು ಗೆಲ್ಲಿಸುವಲ್ಲಿ ಪ್ರತೀ ಬೂತ್ ಮಟ್ಟದಲ್ಲಿ ಪಕ್ಷ ನಿಷ್ಠೆಯಿಂದ ದುಡಿಯೋಣ, ಎಂದು ಹೇಳಿದರು.

ಬಿಜೆಪಿ ಪ್ರಮುಖರು ಅರುಣ್ ಪುತ್ತಿಲ ಮಾತನಾಡಿ ‘ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿಗಳನ್ನು ಎತ್ತಿ ಹಿಡಿಯುತ್ತಿದೆ. ಇವೆಲ್ಲವನ್ನೂ ಮೆಟ್ಟಿ ನಿಂತು ಎಲ್ಲಾ ಸೂಕ್ಷ್ಮತೆಗಳನ್ನು ಗಮನದಲ್ಲಿರಿಸಿಕೊಂಡು ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯೋಣ ಮೋದಿ ನೇತೃತ್ವದ ಬಿಜೆಪಿ ಸರಕಾರವನ್ನು ಗೆಲ್ಲಿಸೋಣ’ ಎಂದು ಹೇಳಿದರು.

ವೇದಿಕೆಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕ ಉಮೇಶ್ ಗೌಡ, ಮಂಗಳೂರು ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ವಿಟ್ಲ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರು ಅರುಣ್ ವಿಟ್ಲ, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷರು ಹರಿಪ್ರಸಾದ್ ಯಾದವ್, ವಿಟ್ಲ ಚುನಾವಣಾ ಪ್ರಭಾರಿ ಶಂಭು ಭಟ್, ಪುಣಚ ಮಹಾ ಶಕ್ತಿ ಕೇಂದ್ರ ದ ಪ್ರಭಾರಿ ಸಹಜ್ ರೈ, ಪುತ್ತೂರು ವಿಧಾನ ಸಭಾ ಕ್ಷೇತ್ರ ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷರು ಹರೀಶ್ ಬಿಜತ್ರೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಕ್ಷದ ಹಲವು ಮುಖಂಡರು, ಪಕ್ಷದ ಪದಾಧಿಕಾರಿಗಳು, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!