Saturday, June 27, 2026
spot_imgspot_img
spot_imgspot_img

ಕೊಣಾಜೆ: 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ

- Advertisement -
- Advertisement -

ಕೊಣಾಜೆ: ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಬೆಂಗಳೂರಿನಲ್ಲಿ ಖರೀದಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಲ್ಲಿಕಾರ್ಜುನ ಮತ್ತು ಸಿಬ್ಬಂದಿ ಬಂಧಿಸಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುವಿನ ಬೆಲೆ 3,90,000 ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.

ಮೆಲ್ಕಾರ್ ಮುಡಿಪು, ನಾಟೆಕಲ್ ರಸ್ತೆಯಲ್ಲಿ ಸಾಗಿಸುವಾಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಆರೋಪಿಗಳಿಂದ ದುಬಾರಿ ಬೆಲೆಯ ಕಾರು ಮತ್ತು ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್ ನಿರ್ದೇಶನದಲ್ಲಿ ಮಾಡಲಾಗಿದೆ.

- Advertisement -

Related news

error: Content is protected !!