Sunday, July 6, 2025
spot_imgspot_img
spot_imgspot_img

ಕನ್ನಡ ರಾಜ್ಯೋತ್ಸವ ಸಂಭ್ರಮ- ಕನ್ನಡಿಗರಿಗೆ ವಿಶೇಷವಾಗಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಬೆಂಗಳೂರು(ನ.1): ಕನ್ನಡ ರಾಜ್ಯೋತ್ಸವದ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ವಿಶೇಷವಾಗಿ ಶುಭಕೋರಿದ್ದಾರೆ. ಕನ್ನಡಿಗರ ಪಾಲಿನ ಹಬ್ಬ ಈ ಬಾರಿ ಕೊರೊನಾ ಕಾರಣದಿಂದ ಸಪ್ಪೆ ಎನಿಸಿದರೂ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುವ ಮೂಲಕ ಕನ್ನಡಿಗರಿಗೆ ಸಂತೋಷ ತಂದಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಇಂದು ಬೆಳಿಗ್ಗೆ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!