Sunday, January 24, 2021

“86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ”ಕ್ಕೆ ದಿನಾಂಕ ಘೋಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಆಭಿಮಾನಿಗಳಿಗೆ ಸಿಹಿ ಸುದ್ದಿ ದೊರೆತಿದ್ದು. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗಧಿಯಾಗಿದೆ.

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಹಾವೇರಿಯಲ್ಲಿ ನಡೆಸಲು ಸಿದ್ಧತೆ ನಡೆಸಿದ್ದು. 2021ರ ಫೆಬ್ರವರಿ 26, 27 ಮತ್ತು 28ರಂದು ದಿನಾಂಕ ನಿಗಧಿ ಪಡೆಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.


ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮನು ಬಳಗಾರ್, ‘ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು ಮಾರ್ಗಸೂಚಿಗಳನ್ನ ಸಡಿಲಗೊಳಿಸಿ ಅಕ್ಷರ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ’ ಎಂದರು.

- Advertisement -

MOST POPULAR

HOT NEWS

Related news

error: Content is protected !!