Sunday, July 19, 2026
spot_imgspot_img
spot_imgspot_img

ಕಣ್ಣೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ನಾಲ್ವರು ಮೃತ್ಯು

- Advertisement -
- Advertisement -

ಕಣ್ಣೂರು: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್-ಮಟ್ಟನ್ನೂರು ರಸ್ತೆಯ ಕೂಡಾಲಿ ಕುಂಬತ್ ಎಂಬಲ್ಲಿ ನಡೆದಿದೆ.

ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಕೇರಳದ ಇಬ್ಬರು ಯುವಕರು ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಮೃತ ರಿಝಾನ್ ಕಾಸರಗೋಡು ಜಿಲ್ಲೆಯ ಮಡಿಕೈ ನಿವಾಸಿ. ಶಾನ್, ಪರ್ವೇಜ್ ಛೇತ್ರಿ ಹಾಗೂ ಹರ್ಷ್‌ ಮೃತರಾದ ಇತರರು.

ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮಟ್ಟನ್ನೂರು ಪೊಲೀಸರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!