- Advertisement -
- Advertisement -






ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು, ದೋಣಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ. ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ. ಶೂಟಿಂಗ್ ವೇಳೆ ಸಾಲು ಸಾಲು ಅವಘಡಗಳು ಸಂಭವಿಸುತ್ತಿರುವುದರಿಂದ ಚಿತ್ರತಂಡ, ಶೂಟಿಂಗ್ಗೆ ಎಲ್ಲ ರೀತಿಯ ಪರವಾನಗಿಗಳನ್ನು ತೆಗೆದುಕೊಂಡಿದೆಯೇ, ಚಿತ್ರೀಕರಣದ ವೇಳೆ ಅಗತ್ಯ ಭದ್ರತಾ ಎಚ್ಚರಿಕೆಗಳನ್ನು ವಹಿಸಿದೆಯೇ ಎಂದು ಪರೀಕ್ಷಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಮುಂದಾಗಿದ್ದಾರೆ.
- Advertisement -