Sunday, June 14, 2026
spot_imgspot_img
spot_imgspot_img

ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು

- Advertisement -
- Advertisement -

ಶಿವಮೊಗ್ಗ: ಕಾಂತಾರ ಚಿತ್ರ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಚಾಪ್ಟರ್-1 (Kantara Chapter-1) ಚಿತ್ರದ ಸಹಕಲಾವಿದ ವಿಜು ವಿ.ಕೆ ಹೃದಯಾಘಾತದಿಂದ ಶಿವಮೊಗ್ಗದಲ್ಲಿ ಸಾವನ್ನಪ್ಪಿದ್ದಾರೆ.

ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಯಡೂರಿನ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಬುಧವಾರ ರಾತ್ರಿ ಏಕಾಏಕಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆ ವಿಜು ಕೊನೆಯುಸಿರೆಳೆದಿದ್ದಾರೆ.

ಸದ್ಯ ವಿಜು ಅವರ ಮೃತದೇಹ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿರಿಸಲಾಗಿದೆ. ಪೊಲೀಸರು ಕೇರಳದಿಂದ ವಿಜು ಕುಟುಂಬಸ್ಥರ ಆಗಮನಕ್ಕೆ ಕಾಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೇ ತಿಂಗಳಲ್ಲಿ ಇದೇ ಚಿತ್ರದಲ್ಲಿ ನಟಿಸಿದ್ದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಕೂಡ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು.

- Advertisement -

Related news

error: Content is protected !!