Sunday, July 19, 2026
spot_imgspot_img
spot_imgspot_img

ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ಯಾನ ಆಶ್ರಮ ಭೇಟಿ

- Advertisement -
- Advertisement -

ಕನ್ಯಾನ : ಪಠ್ಯದ ಜೊತೆಗೆ ಬದುಕಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್ ವತಿಯಿಂದ ವಿದ್ಯಾರ್ಥಿಗಳು ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಭಾರತ ಸೇವಾಶ್ರಮದ ಕಾರ್ಯದರ್ಶಿಗಳಾದ ಈಶ್ವರ ಭಟ್ ಅವರು ವಿದ್ಯಾರ್ಥಿಗಳಿಗೆ ಆಶ್ರಮದ ಹಿನ್ನೆಲೆ ಹಾಗೂ ಹಿರಿಯರನ್ನು ಪ್ರೀತಿ, ಗೌರವದಿಂದ ಕಾಣಬೇಕಾದ ಅವಶ್ಯಕತೆ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ಆಶ್ರಮದಲ್ಲಿರುವ ನಿವಾಸಿಗಳೊಡನೆ ಮಾತುಕತೆ ನಡೆಸಿ, ಅವರಿಗೆ ಹಣ್ಣುಹಂಪಲು ನೀಡುವುದರ ಜೊತೆಗೆ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಜೊತೆಗಿದ್ದರು.

- Advertisement -

Related news

error: Content is protected !!