- Advertisement -
- Advertisement -






ಕಾಣಿಯೂರು: ಸುಮಾರು 80 ಅಡಿ ಆಳದ ಕಣಿವೆಗೆ ಕಾರೊಂದು ಬಿದ್ದ ಘಟನೆ ಪುತ್ತೂರು- ಕಾಣಿಯೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾರು ಚಾಲಕ ಮತ್ತು ಪ್ರಯಾಣಿಕರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಪುತ್ತೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಿದಿರುವುದಾಗಿ ತಿಳಿದು ಬಂದಿದೆ.
- Advertisement -








