Monday, July 27, 2026
spot_imgspot_img
spot_imgspot_img

ಕಾಂಗ್ರೆಸ್ ನಲ್ಲಿ ಭಿನ್ನಮತ: ರಾಹುಲ್ ಗಾಂಧಿ ವಿರುದ್ಧ ಕಪಿಲ್ ಸಿಬಲ್ ಕಿಡಿ

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸೋನಿಯಾ ಗಾಂಧಿ ನಾಯಕತ್ವದ ಬಗ್ಗೆ ಅಪಸ್ವರವೆತ್ತಿ ಪತ್ರ ಬರೆದವರು ಬಿಜೆಪಿ ಏಜೆಂಟ್ ಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಆರೋಪಕ್ಕೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ತೀಕ್ಷ್ಣವಾಗಿಯೇ ಉತ್ತರಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಾವು ಬಿಜೆಪಿ ಜತೆ ಕೈಜೋಡಿಸಿದ್ದೇವೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ನಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಮಣಿಪುರದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ಪಕ್ಷದ ಪರ ಸಮರ್ಥಿಸಿದ್ದೇನೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿ ಪರವಾಗಿ ಹೇಳಿಕೆ ನೀಡಿಲ್ಲ.ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆಯಾ ಎಂದು ಪ್ರಶ್ನಿಸಿದ್ದಾರೆ.

- Advertisement -

Related news

error: Content is protected !!