Saturday, April 20, 2024
spot_imgspot_img
spot_imgspot_img

ಕಪಿಲ್ ಸಿಬಲ್ ಯೂಟರ್ನ್: ರಾಗಾ ವಿರುದ್ಧ ಮಾಡಿದ್ದ ಟ್ವೀಟ್ ಡಿಲೀಟ್

- Advertisement -G L Acharya panikkar
- Advertisement -

ಕಾಂಗ್ರೆಸ್ ಗಾಂಧಿ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದ ಕಪಿಲ್ ಸಿಬಲ್ ಯೂಟರ್ನ್ ಹೊಡೆದಿದ್ದಾರೆ. ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.
ಸೋನಿಯಾ ಗಾಂಧಿ ನಾಯಕತ್ವದ ಬಗ್ಗೆ ಅಪಸ್ವರವೆತ್ತಿ ಪತ್ರ ಬರೆದವರು ಬಿಜೆಪಿ ಏಜೆಂಟ್ ಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

ಇದರಿಂದ ಅಸಮಾಧಾನಗೊಂಡಿದ್ದ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದು, ನಾವು ಬಿಜೆಪಿ ಜತೆ ಕೈಜೋಡಿಸಿದ್ದೇವೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ನಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಮಣಿಪುರದಲ್ಲಿ ಬಿಜೆಪಿ ಸರ್ಕಾರವನ್ನು ಉರುಳಿಸಲು ಪಕ್ಷದ ಪರ ಸಮರ್ಥಿಸಿದ್ದೇನೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿ ಪರವಾಗಿ ಹೇಳಿಕೆ ನೀಡಿಲ್ಲ ಎಂದಿದ್ದರು.

ಆದರೆ ಟ್ವೀಟ್ ಮಾಡಿದ ಕೆಲವೇ ಸಮಯದಲ್ಲಿ ಅದನ್ನು ಡಿಲೀಟ್ ಮಾಡಿರುವ ಕಪಿಲ್ ಸಿಬಲ್, ಸಭೆಯಲ್ಲಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ನನ್ನ ಟ್ವೀಟ್ ಅನ್ನು ಹಿಂಪಡೆದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!