Friday, June 5, 2026
spot_imgspot_img
spot_imgspot_img

ಕಾಪು: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು; ಮಹಿಳೆ ಮೃತ್ಯು..!

- Advertisement -
- Advertisement -

ಕಾಪು: ಪಾದಚಾರಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ.

ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದರು. ಕಾರು ಉಡುಪಿ ಕಡೆಗೆ ಅತೀ ವೇಗದಲ್ಲಿ ಚಲಿಸುತ್ತಿತ್ತು. ಡಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾಪು ಸಿಐ ಜಯಶ್ರೀ ಎಂ ಮಾನೆ, ಎಸ್‌ಐ ಅಬ್ದುಲ್ ಖಾದರ್ ಸ್ಥಳಕ್ಕೆ ಭೇಟಿ ನೀಡಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!