Friday, April 26, 2024
spot_imgspot_img
spot_imgspot_img

ಕಾಪು: ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ.

- Advertisement -G L Acharya panikkar
- Advertisement -

ಉಡುಪಿ: ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರ ತಂಡ ಬಂಧಿಸಿದ ಘಟನೆ ಉದ್ಯಾವರ ಗ್ರಾಮದ ಜೈಹಿಂದ್ ಕಾಂಪ್ಲೆಕ್ಸ್​ ಬಳಿ ನಡೆದಿದೆ.

ಕಕ್ಕುಂಜೆ ನಿವಾಸಿ ಮೊಹಮ್ಮದ್ ಆಲಿ (33) ಮತ್ತು ಮೂಡುಪೆರಂಪಳ್ಳಿ ನಿವಾಸಿ ಶ್ರೀಧರ (32) ಬಂಧಿತ ಆರೋಪಿಗಳು. ಇವರಿಬ್ಬರು ಉದ್ಯಾವರ ಗ್ರಾಮದ ಜೈಹಿಂದ್ ಕಾಂಪ್ಲೆಕ್ಸ್​ ಬಳಿ ಟವೇರಾ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದರ ಖಚಿತ ಮಾಹಿತಿಯಿದ್ದ ಹಿನ್ನೆಲೆ, ಕಾಪು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 1 ಕೆ.ಜಿ 161 ಗ್ರಾಂ ಗಾಂಜಾ, ಎರಡು ಮೊಬೈಲ್, 18,600 ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 2,24,600 ರೂಪಾಯಿಯಾಗಿದೆ. ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!