Saturday, May 4, 2024
spot_imgspot_img
spot_imgspot_img

ಕಾಪು: ಪಾದಾಚಾರಿಗೆ ಟ್ಯಾಂಕರ್ ಡಿಕ್ಕಿ; ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ.

ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ. ಜಯ ಅವರು ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಗಂಭೀರ ಏಟಾದ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆ ಮತ್ತು ಕಟಪಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!