Wednesday, July 29, 2026
spot_imgspot_img
spot_imgspot_img

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!

- Advertisement -
- Advertisement -

ಕಾರ್ಕಳ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮಧುರಪಟ್ಟದ ಬಳಿಯ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ನಿಟ್ಟೆ ಗ್ರಾಮದ ಮಜಾಲು ಮನೆ ನಿವಾಸಿ ಶ್ಯಾಮ್ ಕೋಟ್ಯಾನ್ (65) ಎನ್ನಲಾಗಿದೆ.

ಸೆ.13ರ ಸೋಮವಾರ ಬೆಳಿಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ ಎಂದು ಅವರ ಮಗಳು ಅಖಿಲಾ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸೆ.16 ಗುರುವಾರ ಅವರ ಮೃತದೇಹ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮಧುರಪಟ್ಟಣ ಬಸದಿಯ ಬಳಿ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!