- Advertisement -
- Advertisement -
ಬೆಂಗಳೂರು:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಬೆಂಗಳೂರಿನಿಂದ ಗೋವಾಕ್ಕೆ ತೆರಳಲು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿದ್ದ ವೇಳೆ ತಮ್ಮ ಬ್ಯಾಗ್ ನಲ್ಲಿ ಪಿಸ್ತೂಲ್ ಇಟ್ಟುಕೊಂಡಿದ್ದು ಈವೇಳೆ ತಪಾಸಣೆ ಮಾಡಿದ ವಿಮಾನ ನಿಲ್ದಾಣದ ಸಿಬ್ಬಂದಿಗಳು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇನ್ನು ಈಬಗ್ಗೆ ತನಿಖೆ ನಡೆಸಿದ ಪೊಲೀಸರು ಮಾಹಿತಿ ಕೇಳಿದ್ದು ಗನ್ ಗೆ ಲೈಸನ್ಸ್ ಇದ್ದರೂ ಅದರ ಪತ್ರಗಳನ್ನು ಇಟ್ಟುಕೊಳ್ಳದೇ ಹಾಗೂ ಪೂರ್ವ ಮಾಹಿತಿ ನೀಡದೆ ತೆರಳಿದ್ದರು. ಹೀಗಾಗಿ ವಿಮಾನ ನಿಲ್ದಾಣದ ರಕ್ಷಣಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದರು.ಈಗ ಮೂಲ ದಾಖಲೆ ಪರಿಶೀಲನೆ ನಡೆಸಿದ್ದು ಮಾಜಿ ಸಚಿವ ಆಸ್ನೋಟಿಕರ್ ಬೆಂಗಳೂರಿನ ವಿಮಾನ ನಿಲ್ದಾದಲ್ಲಿ ಲಾಕ್ ಆಗಿದ್ದಾರೆ.
- Advertisement -