Friday, May 3, 2024
spot_imgspot_img
spot_imgspot_img

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ

- Advertisement -G L Acharya panikkar
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಮುಂಜಾನೆಯಿಂದಲೇ ಮಳೆಯ ಆರ್ಭಟ ಹೆಚ್ಚಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಬೀದರ್, ಯಾದಗಿರಿ, ಕಲಬುರ್ಗಿ, ವಿಜಯಪುರದಲ್ಲಿ ಮಳೆ ಹೆಚ್ಚಾಗಿದೆ.

ಸೆ. 19 ಮತ್ತು 20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.  ಕಲಬುರ್ಗಿ, ಬೀದರ್​ನಲ್ಲಿ ಮಳೆ ತನ್ನ ಉಗ್ರರೂಪ ತೋರಿಸುತ್ತಿದೆ. 

ಕೊಡಗಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದೆ. ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಉತ್ತರ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಕಲಬುರ್ಗಿ, ಬೀದರ್​​ನ ನದಿಗಳು ಉಕ್ಕಿ ಹರಿಯುತ್ತಿವೆ.

ನೈಋತ್ಯ ಮಾನ್ಸೂನ್ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ನಿನ್ನೆ ಕರಾವಳಿಯಲ್ಲಿ ಮತ್ತು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಮಲೆನಾಡಿನಲ್ಲಿ ಮಳೆ ಕೊಂಚ ಇಳಿಮುಖಗೊಂಡಿದೆ.

ಕರಾವಳಿಯಲ್ಲಿ 3 ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

- Advertisement -

Related news

error: Content is protected !!