Sunday, July 5, 2026
spot_imgspot_img
spot_imgspot_img

ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ –ಪಿಎಸ್‌ಐ ಬಂಧನ

- Advertisement -
- Advertisement -

ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡನನ್ನು ಬಂಧಿಸಲಾಗಿದೆ.

16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದ್ದು, ಸಂತ್ರಸ್ತ ಬಾಲಕಿ ದೂರಿನ ಮೇಲೆ ಪಿಎಸ್‌ಐನನ್ನು ಅರೆಸ್ಟ್‌ ಮಾಡಲಾಗಿದೆ.

ಬಂಧಿತ ಪಿಎಸ್‌ಐ ಅಭಿನಂದನ್‌ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವನು. ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಎಲ್‌ಎನ್‌ಓ ಆಗಿ ವರ್ಗಾವಣೆಗೊಂಡಿದ್ದನು ಎಂದು ತಿಳಿದುಬಂದಿದೆ.

ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಭಟ್ಕಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!