Monday, May 6, 2024
spot_imgspot_img
spot_imgspot_img

ಕಾರವಾರ: ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ- ಪೊಲೀಸರ ಇಬ್ಬಗೆಯ ನೀತಿಯ ವಿರುದ್ಧ ಮಾಜಿ ಸೈನಿಕರ ಸಂಘದ ಖಂಡನೆ

- Advertisement -G L Acharya panikkar
- Advertisement -

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ನಿವೃತ್ತ ಸೈನಿಕನ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಲ್ಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಕ್ಷಪಾತ ಮಾಡಿದ್ದಾರೆ ಎಂದು ಪೊಲೀಸ್ಇಲಾಖೆ ವಿರುದ್ದ ರಾಜ್ಯ ಮಾಜಿ ಸೈನಿಕರ ಸಂಘ ಆರೋಪದ ಜತೆ ಅಸಮಾಧಾನ ವ್ಯಕ್ತ ಪಡಿಸಿದೆ.

ಕಳೆದ ನಾಲ್ಕು ದಿನದ ಹಿಂದೆ ಜಿಲ್ಲೆಯ ಜೋಯಿಡಾ ತಾಲೂಕಿನ ಬಿರಂಪಾಲಿಯಲ್ಲಿ ಹತ್ತು ಜನರ ಗುಂಪೊಂದು ಜಮೀನು ದಾರಿಯ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಾಜಿ ಸೈನಿಕ ಶಿವಾಜಿ ಎಂಬುವವರ ಮೇಲೆ ತೀವ್ರವಾಗಿ ಮಾರಣಾಂತಿಕ ಹಲ್ಲೆ ನಡೆಸಿತ್ತು.

ದಾರಿಯ ವಿವಾದಕ್ಕೆ ನಡೆದ ಈ ಮಾತಿನ ಚಕಮಕಿ ಹೊಡೆದಾಟದಲ್ಲಿ ಅಂತ್ಯವಾಗಿತ್ತು. ಈ ಘಟನೆಯ ಬಳಿಕ ಹಲ್ಲೆಗೊಳಗಾದ ಮಾಜಿ ಸೈನಿಕನ ಶಿವಾಜಿ ಕುಟುಂಬ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು. ಈ ಸಂದರ್ಭದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಲ್ಲಿ ಪೊಲೀಸರು ವಿಳಂಬ ಮಾಡಿದ್ದಾರೆ. ಪೊಲೀಸರು ಆರೋಪಿಗಳ ಪರ ನಿಂತಿದ್ದಾರೆ ಎಂದು ಶಿವಾಜಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಜೊಯಿಡಾ ತಾಲ್ಲೂಕಿನ ಬೀರಂಪಾಲಿಯ ನಿವೃತ್ತ ಯೋಧ ಶಿವಾಜಿ ಲಕ್ಷ್ಮಣ ಗೌಡನಕರ್ 18 ವರ್ಷಗಳ ಕಾಲ ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿಭಾಯಿಸಿದ್ದರು. ಕಳೆದ ಕೆಲ ವರ್ಷದ ಹಿಂದೆ ನಿವೃತ್ತಿ ಹೊಂದಿದ್ದ ಅವರು ಮುಂದಿನ ಜೀವನಕ್ಕಾಗಿ ಕೂಡಿಟ್ಟ ಹಣದಲ್ಲಿ ಬೀರಂಪಾಲಿಯಲ್ಲಿ ಇದ್ದ ತಮ್ಮ ಜಮೀನಿನಲ್ಲಿ ಸಣ್ಣದೊಂದು ಹೋಂ ಸ್ಟೇ ಆರಂಭಿಸಲು ಮುಂದಾಗಿದ್ದರು. ಆದರೆ ಹೋಂ ಸ್ಟೇಗೆ ದಾರಿ ಮಾಡಿಕೊಳ್ಳಲು ಮುಂದಾದಾಗ ಅಕ್ಕಪಕ್ಕದ ಜಮೀನಿನ‌ ಮಾಲೀಕರ ಗುಂಪೊಂದು ಖ್ಯಾತೆ ತೆಗೆದು ಮಾರಣಾಂತಿಕ ಹಲ್ಲೆ ನಡೆಸಿದ್ದು ಕಳೆದ ಆರು ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ.

ಹಲ್ಲೆ ನಡೆಸಿದ ಆರೋಪಿಗಳು ವಾರದಿಂದ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ರಾಜಕೀಯ ಪ್ರಭಾವ ಬಳಸುತ್ತಿರುವ ಕಾರಣ ಪೊಲೀಸರು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ.‌ ಇದರಿಂದ ನಿವೃತ್ತ ಯೋಧನಿಗೆ ನ್ಯಾಯವೇ ಇಲ್ಲದಂತಾಗಿದೆ. ದೇಶಕ್ಕಾಗಿ ಹಗಲಿರುಳು ಶ್ರಮಿಸಿದ ಯೋಧ ಇದೀಗ ತಾನು ಹಾಗೂ ತನ್ನ ಕುಟುಂಬ ಕಾಪಾಡಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದು, ಪೊಲೀಸರ ಇಬ್ಬಗೆಯ ನೀತಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಖಂಡನೆ ವ್ಯಕ್ತಪಡಿಸಿದೆ.

- Advertisement -

Related news

error: Content is protected !!