Thursday, July 9, 2026
spot_imgspot_img
spot_imgspot_img

ಕಾರವಾರ: ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ದುರ್ಮರಣ

- Advertisement -
- Advertisement -

ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ.

ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಧಾರವಾಡ ಜಿಲ್ಲೆಯವರಾಗಿದ್ದು, ಅವರ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ.

ಮೃತರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!