Saturday, June 27, 2026
spot_imgspot_img
spot_imgspot_img

ಕಾರವಾರ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಬೆಂಕಿ..!

- Advertisement -
- Advertisement -

ಕಾರವಾರ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ನಡೆದಿದೆ.

ವಿನಾಯಕ ಮಂಜುನಾಥ ಹೆಗಡೆ ಎಂಬವರಿಗೆ ಸೇರಿದ ಮನೆಯಾಗಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 70 ಕ್ಕೂ ಹೆಚ್ಚು ಅಡಿಕೆ ಚೀಲಗಳು ಸುಟ್ಟುಹೋಗಿವೆ.

ಬೆಂಕಿ ಅವಘಡದಿಂದ ಐದು ಲಕ್ಷ್ಮಕ್ಕೂ ಹೆಚ್ಚು ಮೌಲ್ಯದ ಅಡಿಕೆ ನಾಶವಾಗಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!