- Advertisement -
- Advertisement -




ಕಾರ್ಕಳ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಗಾಯಾಳುಗಳನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮಯದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು. ವಿಶುಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.
- Advertisement -