Friday, April 26, 2024
spot_imgspot_img
spot_imgspot_img

ಕಾರ್ಕಳ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಮೃತ್ಯು

- Advertisement -G L Acharya panikkar
- Advertisement -

ಕಾರ್ಕಳ: ಬಜಗೋಳಿಯ ನೆಲ್ಲಿಕಾರು ಬಳಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮೃತರನ್ನು ಬೆಂಗಳೂರು ಮೂಲದ ನಾಗರಾಜ್‌ (40), ಅವರ ಪತ್ನಿ ಪ್ರತ್ಯುಷಾ (32) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಆಂಧ್ರದ ಕುಟುಂಬ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಶೃಂಗೇರಿ ಹೋಗುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.

ಕಾರ್ಕಳದಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ಎಚ್ ಟಿ ಕಂಪನಿ ಲಿಮಿಟೆಡ್ ಸಂಸ್ಥೆಗೆ ಸೇರಿದ ಬಸ್‌ ಹುಂಡೈ ಕಾರಿಗೆ ಡಿಕ್ಕಿ ಹೊಡೆದಿರುವ ಪರಿಣಾಮ ಈ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ತಿಳಿದುಬರಬೇಕಾಗಿದೆ.

- Advertisement -

Related news

error: Content is protected !!