Monday, June 17, 2024
spot_imgspot_img
spot_imgspot_img

ಕಾರ್ಕಳ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಓರ್ವ ಮೃತ್ಯು, ಮೂವರು ಗಂಭೀರ..!

- Advertisement -G L Acharya panikkar
- Advertisement -

ಕಾರ್ಕಳ: ಮಾಳ ಕಡಾರಿ ಸುಮ್ಮ ಕಿರಿಯ ಪ್ರಾಥಮಿಕ ಶಾಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕರ ನಿರ್ಲಕ್ಷ್ಯದಿಂದಾಗಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮೂವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮಾಳ ಪೇರಡ್ಕದ ಅಶೋಕ್(25) ಎಂದು ಗುರುತಿಸಲಾಗಿದೆ. ಕಾರು ಚಾಲಕ ದೀಕ್ಷಿತ್ ಹಾಗೂ ಪ್ರಯಾಣಿಕ ಸತೀಶ್ ಘಟನೆಯಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಗಾಯಾಳುಗಳ ಪೈಕಿ ದೀಕ್ಷಿತ್‌ನನ್ನು ಆದರ್ಶ ಆಸ್ಪತ್ರೆಗೆ, ಆಶೋಕ ಮತ್ತು ಸತೀಶನನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

Related news

error: Content is protected !!