Friday, May 17, 2024
spot_imgspot_img
spot_imgspot_img

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್‌ ಆತ್ಮಹತ್ಯೆ

- Advertisement -G L Acharya panikkar
- Advertisement -

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.

ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಗಿದ್ದು ಕೆಲ ದಿನಗಳ ಹಿಂದಷ್ಟೇ ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಕರ್ತವ್ಯಕ್ಕೆ ಹಾಜರಾಗದೇ ರಜೆಯಲ್ಲಿದ್ದರು.

ಅವಿವಾಹಿತರಾಗಿದ್ದ ಪ್ರಶಾಂತ್ ಮಧುಮೇಹ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!