Sunday, June 21, 2026
spot_imgspot_img
spot_imgspot_img

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

- Advertisement -
- Advertisement -

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ.

ಬೆಂಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದುಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಸದಾನಂದ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!