- Advertisement -
- Advertisement -



ಕಾರ್ಕಳ: ಎರ್ಲಪಾಡಿ ಗ್ರಾಮದ ಕಾಂತರಗೋಳಿ ಬಸ್ ನಿಲ್ದಾಣದ ಬಳಿ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಜು.4ರಂದು ಸಂಜೆ ವೇಳೆ ಬಂಧಿಸಿದ್ದಾರೆ.
ನಿಖಿಲ್ ಎಂಬಾತ ಮೊಬೈಲ್ ಆಪ್ ಮೂಲಕ ಆನ್ಲೈನ್ ಗೇಮಿಂಗ್ ಬೆಟ್ಟಿಂಗ್ ಆಟ ಆಡುತ್ತಿರುವ ಮಾಹಿತಿಯಂತೆ ದಾಳಿ ನಡೆಸಿ, ಆಟಕ್ಕೆ ಬಳಸಿದ ಮೊಬೈಲ್ ವಶಪಡಿಸಿಕೊಂಡಿದ್ದು, ಆರೋಪಿಗಳಾದ ನಿಖಿಲ್ ಮತ್ತು ಚರಣ್, ಜಮೀರ್ ಎಂಬವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -