- Advertisement -
- Advertisement -



ಕಾರ್ಕಳ: ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗಿದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ನಗರದ ಆನೆಕೆರೆ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ಸುಶಾಲ್ ಮಾಳ ಎಂದು ಗುರುತಿಸಲಾಗಿದೆ.
ಆನೆಕೆರೆಯ ಮಂಗಳೂರು ರಸ್ತೆಯಲ್ಲಿ ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾದ್ದು ಬೈಕ್ ಸವಾರ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ. ಘಟನೆಯಲ್ಲಿ ರಿಕ್ಷಾ ಜಖಂ ಗೊಂಡಿದೆ. ಗಾಯಾಳುವನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -