- Advertisement -
- Advertisement -




ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂದು ಗುರುತಿಸಲಾಗಿದೆ.
ಜಗದೀಶ ಶೆಟ್ಟಿ ಎಂಬವರು ಕಳೆದ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿ ಇದ್ದು ಸೆ.25ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -








