Tuesday, June 16, 2026
spot_imgspot_img
spot_imgspot_img

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ!

- Advertisement -
- Advertisement -

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿಗಳು ಆರೋಪಿಗಳು ಸತೀಶ್ (24), ವಿಜಯ (35) .

ತಮಿಳುನಾಡು ಮೂಲದ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಾಲಕಿ ತನ್ನ ತಾಯಿ ಹಾಗೂ ಮಲತಂದೆಯೊಂದಿಗೆ ವಾಸವಿದ್ದಳು. ಅಪ್ರಾಪ್ತ ಬಾಲಕಿಗೆ ಮಲತಂದೆಯಿಂದ ಕಿರುಕುಳ ತಡೆಯಲಾರದೆ ಸ್ನೇಹಿತನಿಗೆ ಕರೆಮಾಡಿ ಆತನ ಜೊತೆ ಕಾರ್ಕಳದ ಮನೆಯಲ್ಲಿ 2 ತಿಂಗಳುಗಳಿಂದ ವಾಸವಿದ್ದಳು. ಆದರೆ ಆತನು ಆಕೆಗೆ ಲೈಂಗಿಕ ದೌರ್ಜನ್ಯವೆಸಗಿದ್ದನು ಈ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ದಾಖಲಾಗಿತ್ತು.

ನೊಂದ ಬಾಲಕಿಯ ಮನೆಗೆ ಭೇಟಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿಗಳು ಸಮಾಲೋಚನೆಗೊಳಪಡಿಸಿದರು. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಬಾಲಕಿಯರ ಬಾಲಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಘಟನೆಯ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಅವರು ದೂರು ನೀಡಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದಯಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!