- Advertisement -
- Advertisement -
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/07/knowledge-hub-tution-690x1024.jpeg)
ಕಾರ್ಕಳ: ಟಿಪ್ಪರ್ ಮತ್ತು ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರ್ಕಳ ಪುಕ್ಕೇರಿ ಬಳಿಯ ಫುಡ್ ಬಾಸ್ಕೆಟ್ ಮುಂಭಾಗದಲ್ಲಿ ನಡೆದಿದೆ.
ಮೃತ ಯುವಕನನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕಿಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಝ್ ಎಂಬವರ ಪುತ್ರ ನಿಝಾಮ್ (22) ಮೃತಪಟ್ಟವರು. ಎಂದು ಗುರುತಿಸಲಾಗಿದೆ.
ಕಾರ್ಕಳದಿಂದ ಬೈಪಾಸ್ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಬೈಪಾಸ್ ನಿಂದ ಕಾರ್ಕಳದತ್ತ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸವಾರ ಕಾರ್ ಮೆಕ್ಯಾನಿಕ್ ನಿಝಾಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಕಾರ್ಕಳ ಸರ್ಕಾರಿ ಮೃತದೇಹ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ತಂದೆ ಇಮ್ತಿಯಾಝ್ , ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.
- Advertisement -