Thursday, April 25, 2024
spot_imgspot_img
spot_imgspot_img

ಕರ್ನಾಟಕದ ಹಲವು ಜಿಲ್ಲೆಗಳಿಗೆ 4 ದಿನಗಳ ಕಾಲ ಹಳದಿ ಅಲರ್ಟ್!

- Advertisement -G L Acharya panikkar
- Advertisement -

ಕರ್ನಾಟಕ: ಕರ್ನಾಟಕದ ಹಲವೆಡೆ ಕಳೆದ 3-4 ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇಂದಿನಿಂದ ಏ.16ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ 4 ದಿನಗಳ ಕಾಲ ಮಳೆ ಹೆಚ್ಚಳವಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ ಏ.16ರವರೆಗೆ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನಲ್ಲಿ ಇಂದಿನಿಂದ ಏ.16ರವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರ್ಗಿಯಲ್ಲೂ ಇಂದಿನಿಂದ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗಿನಲ್ಲೂ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಇಂದಿನಿಂದ ಏ. 14ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಇನ್ನು 4 ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿಯೂ ಏ. 16ರವರೆಗೆ ಮಳೆಯಾಗಲಿದೆ. ನಿನ್ನೆ ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಏಪ್ರಿಲ್ 13 ಹಾಗೂ 14ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮತ್ತು ನಾಳೆ ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್​ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಇಂದು ಮಳೆ ಮುಂದುವರೆಯಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಕಳಸ ಸುತ್ತಮುತ್ತ 2 ದಿನಗಳಿಂದ ಮಳೆಯಾಗಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ತೆಲಂಗಾಣ, ಕೇರಳದಲ್ಲೂ ಇನ್ನು ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಪುದುಚೆರಿ, ಕನ್ಯಾಕುಮಾರಿ, ವಯನಾಡ್, ತಿರುವನಂತಪುರಂ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಹೆಚ್ಚು ಮಳೆ ಹೆಚ್ಚಳವಾಗಲಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನು 3 ದಿನ ಮಳೆ ತೀವ್ರಗೊಳ್ಳಲಿದೆ.

ayo
- Advertisement -

Related news

error: Content is protected !!