Friday, June 19, 2026
spot_imgspot_img
spot_imgspot_img

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿಕೆಶಿ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ

ಸರ್ಕಾರ ಗ್ಯಾರಂಟಿ ಯೋಜನೆಯ ಪರಿಷ್ಕರಣೆಗೆ ಕೈ ಹಾಕಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್‌ ಪ್ರಕಟಿಸಿ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ ಎಂದಿದ್ದಾರೆ.

ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!