Friday, May 3, 2024
spot_imgspot_img
spot_imgspot_img

ರಾಜ್ಯ ಬಜೆಟ್‌-2023; ಗೃಹಿಣಿಯರಿಗೆ ಮಾಸಿಕ 500 ರೂ. ಸಹಾಯಧನ, ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌- ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ

- Advertisement -G L Acharya panikkar
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲಿಗೆ ಈ ಬಾರಿಯ ಬಜೆಟ್ ಬಹಳ ಪ್ರಾಮುಖ್ಯತೆ ಪಡೆದಿದೆ. ರಾಜ್ಯ ಬಜೆಟ್ ಮಂಡಿಸಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ

ಬಡ್ಡಿರಹಿತ ಸಾಲದ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ರೈತರಿಗೆ ನೀಡುವ ಬಡ್ಡಿರಹಿತ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಹೀಗಾಗಿ ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ ಸಿಗಲಿದೆ. 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸಲಾಗುವುದು ಎಂದು ಸಿಎಂ ತಿಳಿಸಿದರು.

ಭೂ ಸಿರಿ ಯೋಜನೆ
ಕಿಸಾನ್‌ ಕಾರ್ಡ್‌ ಹೊಂದಿರುವ ರೈತರಿಗೆ ಭೂಸಿರಿ ಎಂಬ ಹೊಸ ಯೋಜನೆ ಪರಿಚಯಿಸಲಾಗಿದೆ. ಈ ಯೋಜನೆಯಡಿಯಲ್ಲಿ 2023-24ನೇ ಸಾಲಿನಿಂದ ರೈತರಿಗೆ 10 ಸಾವಿರ ರೂ. ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳನ್ನು ಖರೀದಿಸಲು ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ. ಹಾಗೂ ನಬಾರ್ಡ್ ನ 7,500 ರೂ. ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

ರೈತ ಸಿರಿ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ
ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೀಗಾಗಿ ಸಿರಿಧಾನ್ಯ ಉತ್ಪಾದನೆಗೆ ರೈತರಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇನ್ನು ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ.

ಅತ್ಯಾಧುನಿಕ ಕೃಷಿ ಯಂತ್ರೋಪಕರ
ರೈತರಿಗೆ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳು ಸುಲಭವಾಗಿ ಗಿ ದೊರೆಯುವಂತೆ ಮಾಡಲು ಕೃಷಿ ಇಲಾಖೆಯು ಈಗಾಗಲೇ ನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 300 ಹೈಟೆಕ್‌ 11 ಹಾರ್ವೆಸ್ಟರ್ ಗಳನ್ನು ಹಂತ ಹಂತವಾಗಿ ಒದಗಿಸಲು ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಗಳಿಗೆ ತಲಾ 50 ಲಕ್ಷ ರೂ. ನಂತೆ, ಈ ವರ್ಷ 50 ಕೋಟಿ ರೂ. ಒದಗಿಸಲಾಗುವುದು.

ಡಿಜಿಟಲ್ ಕೃಷಿ
ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ಡಿಜಿಟಲ್ ಕೃಷಿಯಲ್ಲಿ ಜಿಯೋ-ಸ್ಪೇಷಿಯಲ್ ತಾಂತ್ರಿಕತೆಗಳನ್ನು ಅಳವಡಿಸಲು 50 ಕೋಟಿ ರೂ. ವೆಚ್ಚದಲ್ಲಿ ಒಂದು ಹೊಸ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯಿಂದ ದೊರಕುವ ಮಾಹಿತಿಗಳನ್ನು ಉಪಯೋಗಿಸಿ, Precision Farming ಸೇರಿದಂತೆ ತಮ್ಮ ಉತ್ಪಾದನೆಯನ್ನು ಹೆಚ್ಚಿಸಲು ತಿಳಿವಳಿಕೆಯುಳ್ಳ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ರೈತರಿಗೆ ಅನುಕೂಲವಾಗಲಿದೆ.

ಜೀವನ್‌ಜ್ಯೋತಿ ವಿಮಾ ಯೋಜನೆ
ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆಯ ನೆರವಿನೊಂದಿಗೆ ಅವರ ಬದುಕಿಗೆ ಭದ್ರತೆ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದರು.

ರಾಮನಗರದಲ್ಲಿ ದಕ್ಷಿಣ ಅಯೋಧ್ಯೆ, ದೇವಸ್ಥಾನ-ಮಠ ಜೀರ್ಣೋದ್ದಾರಕ್ಕೆ 1 ಸಾವಿರ ಕೋಟಿ..!
ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆಯಾಗಿದೆ. ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ.

100 ಕೋಟಿ ರೂ. ವೆಚ್ಚದಲ್ಲಿ ಮಕ್ಕಳ ಬಸ್ಸು ಯೋಜನೆ ಜಾರಿ
100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯಡಿ 1000 ಹೊಸ ಶಾಲಾ-ಕಾಲೇಜು ಮಕ್ಕಳ ಬಸ್ ಓಡಾಟ ನಡೆಸಲಿದ್ದು, ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕರ್ನಾಟಕದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸುವುದಾಗಿ ಎಂದು ಘೋಷಿಸಿದ್ದಾರೆ.

ಆರೋಗ್ಯ ಕ್ಷೇತ್ರ: ‘ಜೀವಸುಧೆ’, ‘ಮನೆ ಮನೆಗೆ ಆರೋಗ್ಯ’ ಯೋಜನೆ ಘೋಷಣೆ

*ಕರ್ನಾಟಕ ಮೆಂಟಲ್‌ ಹೆಲ್ತ್‌ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲು ನಿರ್ಧಾರ
*ಎಲ್ಲಾ ಜಿಲ್ಲೆಗಳಲ್ಲಿ Hand Held X-ray ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ & ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ.
*ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು ‘ಜೀವಸುಧೆ’ ಎಂಬ ವ್ಯಾಪಕ ತಪಾಸಣಾ ಕಾರ್ಯಕ್ರಮ ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ ಅಂಗಾಂಗ *ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.
*ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು
*ಸ್ಥಾಪನೆ ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಎಂದು ಪುನರ್ ರಚನೆ ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ *ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು *ಸ್ಥಾಪಿಸಲಾಗುವುದು. ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪಿಸಲಾಗುವುದು. *ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ

ಸ್ತ್ರೀ ಶಕ್ತಿ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀ ಸಾಮಥ್ರ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ ನೀಡಲು ಅವಕಾಶ ಮಾಡಲಾಗಿತ್ತು ಹಾಗೂ ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಲು ಅವಕಾಶ ನೀಡಲಾಗಿದೆ.

ಗೃಹಿಣಿ ಶಕ್ತಿ ಯೋಜನೆ ಜಾರಿ
ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಅಡಿಯಲ್ಲಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್ ನೀಡಲು ಕ್ರಮ ವಹಿಸಲಾಗುವುದು ಎಂದು ಘೋಷಿಸಿದ್ದಾರೆ.

ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ

ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

1,230 ಶಾಲಾ ಕೊಠಡಿ ನಿರ್ಮಾಣ
ರಾಜ್ಯದಲ್ಲಿ ಹೆಚ್ಚುವರಿಯಾಗಿ 2022-2023ನೇ ಸಾಲಿನಲ್ಲಿ 1,230 ಶಾಲಾ ಕೊಠಡಿ ನಿರ್ಮಾಣ. ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಹೊಸದಾಗಿ 6 ಇಎಸ್​ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಲಾಗುವುದು.

ಅಡಿಕೆ ಬೆಳೆ ರೋಗ ನಿರ್ವಹಣೆ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ. ಅನುದಾನ
ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ. ಅನುದಾನ ಘೋಷಣೆ. ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಆರಂಭಿಸಲಾಗುವುದು. ಜತೆಗೆ, ರೇಷ್ಮೆ ಬೆಳೆ 10 ಸಾವಿರ ಹೆಕ್ಟೇರ್​​ಗೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು.

ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಜಾರಿ
.

ಅಂಗನವಾಡಿ ಸಿಬ್ಬಂದಿಗೆ ಭರ್ಜರಿ ಬಂಪರ್‌:
ರಾಜ್ಯದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ ಮಾಡಲಾಗಿದೆ. ಈ ಹಿಂದೆ ಇದ್ದ ಅಂಗನವಾಡಿ ಕಾರ್ಯಕರ್ತರಿಗೆ ಇದ್ದ ಗೌರವಧನವನ್ನು 1 ಸಾವಿರ ರೂ.ಗಳಿಂದ 1,500 ರೂ. ಹೆಚ್ಚಳ ಮಾಡಲಾಗಿದೆ. ಸಹಾಯಧನ ಏರಿಕೆಯಿಂದ ಭಾರಿ ಅನುಕೂಲ ಆಗಿದೆ. ಅಂಗನವಾಡಿ ಸಹಾಯಕರಿಗೆ ಗ್ರ್ಯಾಚುಟಿ ಕೊಡಲು ನಿರ್ಧಾರ ಮಾಡಲಾಗಿದ್ದು, ಇದಕ್ಕಾಗಿ 40 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. 25 ವರ್ಷ ಸೇವೆಯನ್ನು ಸಲ್ಲಿಸಿದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಂಗನವಾಡಿ ಕಾರ್ಯಕರ್ತರಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುವುದು. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದರೆ ಅವರಿಗೆ 30 ಸಾವಿರ ರೂ. ಸಹಾಯಧನ ನೀಡಲಾಗುವುದು. ಈ ವೇಳೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದಾದರೆ ಸ್ವಯಂ ನಿವೃತ್ತಿಗೂ ಅವಕಾಶ ನೀಡಲಾಗುತ್ತದೆ
.

ಮೀನುಗಾರಿಕೆ ಕ್ಷೇತ್ರ

  • ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಯಲ್ಲಿ ಪೆಟ್ರೋಲ್‌/ಡೀಸೆಲ್‌ ಆಧಾರಿತ ಇಂಜಿನ್‌ ಅನ್ನು ಅಳವಡಿಸಲು ತಲಾ 50 ಸಾವಿರ ರೂ ಸಹಾಯಧನ. ಇದಕ್ಕಾಗಿ ಪ್ರಸಕ್ತ ವರ್ಷ 40 ಕೋಟಿ ಮೀಸಲು. ಈ ಪ್ರಕ್ರಿಯೆ ಪೂರ್ಣವಾಗುವವರೆಗೆ 2 ವರ್ಷಗಳವರೆಗೆ ಸೀಮೆಎಣ್ಣೆ ಸಹಾಯಧನ ವಿಸ್ತರಣೆ.

ಮೀನುದಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಡೀಸೆಲ್‌ನ ಮಿತಿಯನ್ನು 1.5 ಲಕ್ಷ ಕಿಲೋ ಮೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ಗೆ ಏರಿಕೆ. ಇದಕ್ಕಾಗಿ ಸರ್ಕಾರ 250 ಕೋಟಿ ರೂಪಾಯಿ ಮೀಸಲಿಡಲಿದೆ.

  • ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನ ಸರಳೀಕರಿಸಿ ಪ್ರಸಕ್ತ ವರ್ಷದಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮೆ.
  • ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನ ನೀಡಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಸ್ಯ ಸಿರಿ ಎಂಬ ಹೊಸ ಯೋಜನೆ ಜಾರಿ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.
  • ಉತ್ತಮ ತಳಿತ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು ಪ್ರೋತ್ಸಾಹಿಸಲು 20 ಕೋಟಿ ರೂಪಾಯಿ ಅನುದಾನ.
  • ಕಳೆದ ವರ್ಷ 10.73 ಲಕ್ಷ ಮೆಟ್ರಿಕ್‌ ಟನ್‌ ಮೀನು ಉತ್ಪಾದನೆ ಮಾಡುವ ಮೂಲಕ, ದೇಶದಲ್ಲಿಯೇ ಗರಿಷ್ಠ ಮೀನು ಉತ್ಪಾದನೆ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ಯಾವ ಇಲಾಖೆಗೆ ಎಷ್ಟು ಅನುದಾನ?
ಶಿಕ್ಷಣ ಇಲಾಖೆಗೆ 37,960 ಕೋಟಿ ರೂ.
ಜಲಸಂಪನ್ಮೂಲ ಇಲಾಖೆ – 22,854 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ – 20,494 ಕೋಟಿ ರೂ.
ನಗರಾಭಿವೃದ್ಧಿ ಇಲಾಖೆ – 17,938 ಕೋಟಿ ರೂ.
ಕಂದಾಯ ಇಲಾಖೆ – 15,943 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 15,151 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ – 14,509 ಕೋಟಿ ರೂ.
ಇಂಧನ ಇಲಾಖೆ – 13,803 ಕೋಟಿ ರೂ.
ಸಮಾಜ ಕಲ್ಯಾಣ ಇಲಾಖೆ – 11,163 ಕೋಟಿ ರೂ.
ಲೋಕೋಪಯೋಗಿ ಇಲಾಖೆ – 10,741 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆ ಇಲಾಖೆ – 9,456 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 5,676 ಕೋಟಿ ರೂ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 4,600 ಕೋಟಿ ರೂ.
ವಸತಿ ಇಲಾಖೆ – 3,787 ಕೋಟಿ ರೂ.
ಇತರೆ ಇಲಾಖೆ – 1,16,968 ಕೋಟಿ ರೂ.

- Advertisement -

Related news

error: Content is protected !!