Thursday, April 25, 2024
spot_imgspot_img
spot_imgspot_img

ಕರ್ನಾಟಕ ಬಂದ್‌: ಕರಾವಳಿಯಲ್ಲೂ ಬೆಂಬಲ, ಏನಿರುತ್ತೇ- ಏನಿರಲ್ಲ?

- Advertisement -G L Acharya panikkar
- Advertisement -

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು
ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು
ರೈತ ವಿರೋಧಿ ಎಂದು ಆರೋಪಿಸಿ ಸೋಮವಾರ ಕರೆ ನೀಡಿರುವ ಬಂದ್‌ಗೆ ರೈತ ಸಂಘಟನೆಗಳು ಜಂಟಿಯಾಗಿ ನಾಳೆ ಕರೆ ನೀಡಿರುವ ‘ಕರ್ನಾಟಕ ಬಂದ್’ ಗೆ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ  ನಡೆಯಲಿದೆ.

ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ  ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ನಡೆಯಲಿದೆ.

ಬಸ್‌ ಸಂಚಾರ ಇರಲಿದೆ
ಸೆ. 28ರಂದು ಬಸ್‌ ಸಂಚಾರ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್‌ ಸಂಚಾರ ಎಂದಿನಂತೆ ಇರಲಿದೆ ಎಂದು ದ.ಕ. ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ತಿಳಿಸಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ
ನಗರದಲ್ಲಿ ಬಂದ್‌ ಕರೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ. 28ರಂದು ನಡೆಯಬೇಕಿದ್ದ ಎಸೆಸೆಲ್ಸಿ ಪೂರಕ ಪರೀಕ್ಷೆಯಡಿ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ಸೆ. 29ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ವಿ.ವಿ. ಪರೀಕ್ಷೆ ಮುಂದಕ್ಕೆ
ಮಂಗಳೂರು ವಿಶ್ವವಿದ್ಯಾನಿಲಯ ಸೆ. 28ರಂದು ನಿಗದಿಪಡಿಸಿದ್ದ ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಪರಿಷ್ಕೃತ ದಿನಾಂಕವನ್ನು ತಿಳಿಸಲಾಗುವುದು. ಉಳಿದೆಲ್ಲ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!