Friday, April 19, 2024
spot_imgspot_img
spot_imgspot_img

ಟೌನ್​​​ಹಾಲ್ ಬಳಿ ಪ್ರತಿಭಟನೆ-ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರು ವಶಕ್ಕೆ

- Advertisement -G L Acharya panikkar
- Advertisement -

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಗರದ ಟೌನ್​​​ಹಾಲ್ ಬಳಿ ಪ್ರತಿಭಟನೆ ನಡೆಸಲು ಮುಂದಾದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಟೌನ್​​ ಹಾಲ್​ ಬಳಿ ಪ್ರತಿಭಟಿಸಲು ಅನುಮತಿ ನೀಡಿಲ್ಲ. ಆದ್ರೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಟೌನ್​ಹಾಲ್ ಬಳಿ ಜಮಾಯಿಸಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದರು. ಹೀಗಾಗಿ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್​ನಲ್ಲಿ ಕರೆದೊಯ್ದರು.ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲ ಸಮಯ ವಾಗ್ವಾದ ಏರ್ಪಟಿತ್ತು.

ಕೆಲ ಕಾಲ ಸ್ಥಳದಲ್ಲಿ ಹೈಡ್ರಾಮಾ ನಡೆಯಿತು. ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳಾಂತರ ಮಾಡಿದರು.ಇವತ್ತಿನ ಕರ್ನಾಟಕ ಬಂದ್​ ವೇಳೆ ಅಹಿತಕರ ಘಟನೆ ನಡೆಯದಂತೆ ರಾಜ್ಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಹುಬ್ಬಳಿ, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. 33 ಕೆಎಸ್​​ಆರ್​​ಪಿ ತುಕುಡಿ, 37 ಸಿಎಆರ್​​ತುಕುಡಿಗಳನ್ನ ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿ 15 ಸಾವಿರ ಪೊಲೀಸ್​​ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.

- Advertisement -

Related news

error: Content is protected !!