Monday, August 31, 2026
spot_imgspot_img
spot_imgspot_img

ಬಾಲ್ಯವಿವಾಹಗಳ ಗಣನೀಯ ಏರಿಕೆ: ಕರ್ನಾಟಕಕ್ಕೆ ಅಗ್ರಸ್ಥಾನ

- Advertisement -
- Advertisement -

ಬೆಂಗಳೂರು: ಕೊರೊನಾದಿಂದಾಗಿ ಶಾಲೆಗಳು ಮುಚ್ಚಿದ್ದರಿಂದ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ಪರಿಷತ್ತಿನಲ್ಲಿ ವಿರೋಧ ಪಕ್ಷದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್, 2020-21ರಲ್ಲಿ ರಾಜ್ಯದಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಈ ಅಂಕಿ ಅಂಶವು ಹಿಂದಿನ ವರ್ಷ 140 ರಷ್ಟಿತ್ತು. ಆದರೆ 2018-19 ರಲ್ಲಿ ಕೇವಲ 119 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು.

ಇನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, 2020 ರಲ್ಲಿ 184 ಪ್ರಕರಣಗಳು ವರದಿಯಾಗಿರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ವರದಿಯಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ. ಈ ವಿದ್ಯಮಾನಕ್ಕೆ ಬಡತನ, ಅನಕ್ಷರತೆ, ಮೂಢನಂಬಿಕೆಗಳು, ಕೊರತೆ ಕಾರಣ. ಬಾಲ್ಯವಿವಾಹ ಕಾನೂನುಗಳು, ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ನಿರ್ಲಕ್ಷ್ಯ, ಹಿರಿಯ ಕುಟುಂಬದ ಸದಸ್ಯರು ಸ್ಥಾಪಿತ ಸಂಪ್ರದಾಯಗಳಿಗೆ ಅಂಟಿಕೊಂಡಿರುವುದೇ ಕಾರಣ ಎಂದು ತಿಳಿಸಿದ್ದಾರೆ. ಇನ್ನು ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಪ್ರೌಢಶಾಲೆ ಮತ್ತು ಪಿಯು ಕಾಲೇಜು ಹಂತಗಳ ನಂತರ ತಮ್ಮ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಹುಡುಗಿಯರ ಮೇಲೆ ನಿಕಟ ನಿಗಾ ಇಡಬೇಕು ಎಂದು ಸೂಚಿಸಿದರು.

ಮಕ್ಕಳ ಹಕ್ಕುಗಳ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ ಶರ್ಮಾ ಎನ್‌ವಿ ಮಾತನಾಡಿ, ಬಾಲ್ಯ ವಿವಾಹಗಳ ನಿಜವಾದ ಸಂಖ್ಯೆ ಇನ್ನೂ ಹೆಚ್ಚಿದೆ ಅನೇಕ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ನಿಜವಾದ ವಯಸ್ಸನ್ನು ದಾಖಲಿಸದೇ ಇರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರ ವಯಸ್ಸನ್ನು ಸರಿಯಾಗಿ ದಾಖಲಿಸಿದರೆ ಬಾಲ್ಯವಿವಾಹದ ಸರಿಯಾದ ಅಂಕಿ-ಅಂಶ ಸಿಗುತ್ತದೆ ಎಂದರು.

- Advertisement -

Related news

error: Content is protected !!