Sunday, April 28, 2024
spot_imgspot_img
spot_imgspot_img

*ವಾರದೊಳಗೆ ತಂಬಾಕು, ಗುಟ್ಕಾ ನಿಷೇಧ* *ರಾಜ್ಯ ಸರ್ಕಾರದಿಂದ ಸುಗ್ರಿವಾಜ್ಞೆ ಸಾಧ್ಯತೆ*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧವಾಗಲಿದೆ. ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ವಾರದೊಳಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲಿದ್ದು, ಈ ಬಗ್ಗೆ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಸರ್ಕಾರ ವರದಿ ಸಲ್ಲಿಸಿದೆ.

ರಾಜ್ಯದಲ್ಲಿ ತಂಬಾಕು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳ ನಿಷೇಧದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ರಾಜ್ಯಪಾಲರು ಚರ್ಚಿಸಿದ್ದರು.

ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ರಾಜ್ಯದಲ್ಲಿ ತಂಬಾಕು ನಿಷೇಧದ ಬಗ್ಗೆ ಸರ್ಕಾರ ಕೈಗೊಂಡಿರುವ ನಿರ್ಧಾರದ ಕುರಿತು ವರದಿ ಸಲ್ಲಿಸಿದ್ದಾರೆ.

- Advertisement -

Related news

error: Content is protected !!