Saturday, June 13, 2026
spot_imgspot_img
spot_imgspot_img

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ನಿಧನ

- Advertisement -
- Advertisement -

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1969ರ ಜುಲೈ 26ರಂದು ವಕೀಲರಾಗಿ ತಮ್ಮ ಸೇವೆ ಪ್ರಾರಂಭಿಸಿದರು. 1983ರಲ್ಲಿ ಜಿಲ್ಲಾ ನ್ಯಾಯಾಧೀಶರಾದ ಅವರು ಕಲಬುರಗಿ, ಬೆಂಗಳೂರು, ಕೋಲಾರ, ಧಾರವಾಡ, ಮಂಗಳೂರಿನಲ್ಲಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದರು.

ನಿವೃತ್ತಿಯ ನಂತರ 2007ರಿಂದ 2009ರವರೆಗೆ ರೈಲ್ವೆ ಕ್ಲೇಮು ನ್ಯಾಯಮಂಡಳಿ ಅಧ್ಯಕ್ಷರಾಗಿ ದೆಹಲಿಯಲ್ಲಿದ್ದ ಅವರು, ನಂತರ ಶಿಕ್ಷಣ ಇಲಾಖೆಯ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರಾಗಿದ್ದರು.

- Advertisement -

Related news

error: Content is protected !!