Friday, May 17, 2024
spot_imgspot_img
spot_imgspot_img

ಕರ್ನಾಟಕ ವಿಧಾನ ಪರಿಷತ್; 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ..!

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೆಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರದ ಪರಿಷತ್ ಸದಸ್ಯ ಡಾ ಚಂದ್ರಶೇಖರ್ ಬಿ ಪಾಟೀಲ್., ನೈಋತ್ಯ ಪದವೀಧರ ಕ್ಷೇತ್ರ- ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ- ಎ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರ-ವೈ ಎ ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರ- ಎಸ್​ಎಲ್​ ಬೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರ- ಮರಿತಿಬ್ಬೇಗೌಡ ಮೇಲೆ ತಿಳಿಸಲಾದ ಆರು ಸದಸ್ಯರ ವಿಧಾನಪರಿಷತ್ ಅವಧಿ ಜೂನ್ 21 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಆಗಿದೆ.

- Advertisement -

Related news

error: Content is protected !!