Saturday, June 6, 2026
spot_imgspot_img
spot_imgspot_img

ಹೈಕಮಾಂಡ್​ ಗ್ರೀನ್​ ಸಿಗ್ನಲ್​ ನೀಡಿದ್ರೆ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ.

- Advertisement -
- Advertisement -

ಕಲಬುರಗಿ: ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ಅಪೇಕ್ಷೆ ಇದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ರೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದು ದೆಹಲಿಗೆ ಹೋಗ್ತಿದ್ದೇನೆ. ನಾಳೆ ಪ್ರಧಾನಿ ಮೋದಿ ಮತ್ತು ಕೇಂದ್ರದ ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚಿಸಲಿದ್ದೇನೆ. ಸಚಿವ ಸಂಪುಟದ ಪುನರ್ ರಚನೆ ಅಥವಾ ವಿಸ್ತರಣೆ ಕೇಂದ್ರ ನಾಯಕರ ನಿರ್ಧಾರದ ಮೇಲೆ ಅವಲಂಬಿಸಿದೆ ಎಂದರು‌.

ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆಗೂ ಪ್ರಧಾನಿ ಮೋದಿಯವರಿಗೆ ಮನವಿ ಮಾಡಲಿದ್ದೇನೆ. ಇನ್ನು ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಸಲಹೆ ಮೇರೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಬಳಿಕ ಬಿಜೆಪಿ‌ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!