Sunday, June 21, 2026
spot_imgspot_img
spot_imgspot_img

ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಿದ ರಾಜ್ಯ ಚುನಾವಣಾ ಆಯೋಗ

- Advertisement -
- Advertisement -

ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ನಗರ ಸ್ತಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಡಿ.8 ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟ
ಡಿ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ
ಡಿ.16 ನಾಮಪತ್ರಗಳನ್ನು ಪರಿಶೀಲಿಸುವ ದಿನ
ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ
ಡಿ.27 ಮತದಾನ
ಡಿ.29 ಮರುಮತದಾನ ಅವಶ್ಯಕವಿದ್ದಲ್ಲಿ
ಡಿ.30 ಮತ ಎಣಿಕೆ

ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಡಿ.8 ರಿಂದ 30 ರ ತನಕ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ.

- Advertisement -

Related news

error: Content is protected !!