Tuesday, May 7, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

- Advertisement -G L Acharya panikkar
- Advertisement -

ರಾಜ್ಯದೆಲ್ಲೆಡೆ ಕಳೆದ 2 ವಾರಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ ಅಂತ್ಯದವರೆಗೂ ಮುಂಗಾರು ಮುಂದುವರೆಯಲಿದೆ. ಇಂದಿನಿಂದ ಆ. 30ರವರೆಗೂ ಕರ್ನಾಟಕದಲ್ಲಿ ವರುಣನ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇನ್ನೂ 4 ದಿನ ಮಳೆಯ ಅಬ್ಬರ ಹೆಚ್ಚಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಹೆಚ್ಚು ಮಳೆಯಾಗಲಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಮಲೆನಾಡು, ಕೊಡಗಿನತ್ತ ವೀಕೆಂಡ್​ನಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಹಾಗೇ, ಆ. 28 ಮತ್ತು 29ರಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿತ್ತು. ಆದರೆ, ಆಗಸ್ಟ್​ನಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕಳೆದೆರಡು ತಿಂಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಇಳಿಮುಖವಾಗಿದೆ. ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ 13 ಜಿಲ್ಲೆಗಳಲ್ಲಿ ಆ. 28 ಮತ್ತು 29ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 30ರವರೆಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.

ಇಂದು ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ಬಿಹಾರ, ಉತ್ತರಾಖಂಡ, ಉತ್ತರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿಯಲ್ಲಿ ಭಾರೀ ಮಳೆಯಾಗಲಿದೆ. ಅರುಣಾಚಲಪ್ರದೇಶ, ಸಿಕ್ಕಿಂ, ಒರಿಸ್ಸಾ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರದಲ್ಲಿ ಕೂಡ ಇಂದು ವ್ಯಾಪಕ ಮಳೆಯಾಗಲಿದೆ. ಜಾರ್ಖಂಡ್, ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶ, ಮಹಾರಾಷ್ಟ್ರ, ಛತ್ತೀಸ್​ಗಢ, ಆಂಧ್ರಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್, ಮಧ್ಯಪ್ರದೇಶ, ಗುಜರಾತ್​ನಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಲ್ಲಿ ಇನ್ನೂ 1 ತಿಂಗಳ ಮುಂಗಾರಿನ ಅಬ್ಬರವಿರಲಿದೆ.

driving
- Advertisement -

Related news

error: Content is protected !!