Thursday, June 18, 2026
spot_imgspot_img
spot_imgspot_img

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

- Advertisement -
- Advertisement -

ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.

ಇನ್ನು ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲೆ ಇದ್ದು, ಇದೀಗ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -

Related news

error: Content is protected !!