Sunday, October 6, 2024
spot_imgspot_img
spot_imgspot_img

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ..!

- Advertisement -
- Advertisement -

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಇನ್ನೊಂದೆಡೆ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಏ.20 ಮತ್ತು ಏ.21 ರಂದು ಹವಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

- Advertisement -

Related news

error: Content is protected !!