Wednesday, July 22, 2026
spot_imgspot_img
spot_imgspot_img

ಗೋವಾ ಸಮುದ್ರ ಪ್ರದೇಶದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಮುಳುಗಡೆ – 22 ಮೀನುಗಾರರ ರಕ್ಷಣೆ

- Advertisement -
- Advertisement -

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ.

ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 22 ಮೀನುಗಾರರನ್ನು ರಕ್ಷಿಸಲಾಗಿದೆ. ಅಕ್ಕ ಪಕ್ಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮುದಗಾದ ದಿನೇಶ್ ಕಾಂಚನ್ ಎಂಬವರ ಮಾಲೀಕತ್ವದ ‘ಶ್ರೀ ಅಮ್ಮ’ ಹೆಸರಿನ ಪರ್ಷಿಯನ್ ಬೋಟ್ ಕಾರವಾರದ ಮುದಗಾ ಬಂದರಿನಿಂದ ಒಂದು ವಾರದ ಹಿಂದೆ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆ ಪರಿಣಾಮ ಬೋಟ್ ಹಾಗೂ ಬಲೆ ಸೇರಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!