- Advertisement -
- Advertisement -



ಕಾರವಾರ: ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಬರುವಾಗ ಬೊಲೆರೊ ಓಮಿನಿ ನಿಂತಿದ್ದ ಪಿಕ್-ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಗಂಭೀರ ಗಾಯಗೊಂಡ ಮಕ್ಕಳು. ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








