- Advertisement -
- Advertisement -



ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 24 ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಲಾರಿ, ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಎರಡು ಬಸ್ಸುಗಳಿಗೆ ಸರಣಿ ಅಪಘಾತವಾಗಿದ್ದು, ಲಾರಿ ಮತ್ತು ಸಿಬರ್ಡ್ ಬಸ್ ಮುಖಾಮುಖಿ ಡಿಕ್ಕಿಯಾದವು. ನಂತರ ಹಿಂಬದಿಯಿಂದ ಸಿಬರ್ಡ್ ಬಸ್‌ಗೆ ಗಣೇಶ್ ಟ್ರಾವೆಲ್ಸ್ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಪಲ್ಟಿಯಾಗಿ, ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.
ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ 12 ವಿದೇಶಿ ಪ್ರಯಾಣಿಕರಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಅಂಕೋಲ ಹಾಗೂ ಕಾರವಾರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








