Thursday, September 3, 2026
spot_imgspot_img
spot_imgspot_img

ಕಾಸರಗೋಡು: ಸ್ಕೂಟರ್-ಬೈಕ್ ಡಿಕ್ಕಿ- ಮಗ ಸಾವು, ತಂದೆಗೆ ಗಂಭೀರ ಗಾಯ

- Advertisement -
- Advertisement -

ಕಾಸರಗೋಡು: ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 28 ರ ಗುರುವಾರ ಬೆಳಿಗ್ಗೆ ಬಂದ್ಯೋಡು-ಪೆರ್ಮುದೆ ಬಳಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.

ಚಿಪ್ಪಾರು ಬಾಯಾರು ನೆತ್ತರಗುಳಿ ನಿವಾಸಿ ಎನ್. ಕಿಶನ್(24) ಮೃತಪಟ್ಟಿದ್ದು, ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಅವರ ತಂದೆ ಮಾಧವ ದೇವಾಡಿಗ(55) ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಿಶನ್ ಚಲಾಯಿಸುತ್ತಿದ್ದ ಸ್ಕೂಟರ್‍ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಬೈಕ್ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ, ತೀವ್ರವಾಗಿ ಗಾಯಗೊಂಡಿದ್ದ ಅವರ ತಂದೆಯನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!